ಬಂಟ್ವಾಳ, ಜುಲೈ 06 : ಕಾಲೇಜಿಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಇರಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಎಂದಿನಂತೆ ಕಾಲೇಜಿಗೆ ಹೋಗಲು ಮೋಂತಿಮಾರು ಪಡ್ಪು ನ ಬಸ್ ಸ್ಟಾಂಡಿನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮೇಲೆ ಹರಿತವಾಗ ಆಯುಧದಿಂದ ಹಲ್ಲೆ ನಡೆಸಿ ಬಳಿಕ ಪರಾರಿಯಾಗಿದ್ದಾನೆ. ಗಾಯಗೊಂಡ ಬಾಲಕಿಯನ್ನು ಮಂಗಳೂರು ಆಸಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಾಲಕಿಯು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಆರೋಪಿಯನ್ನು ಸ್ಥಳೀಯ ನಿವಾಸಿ ಜವ್ವಾರ್ ಎಂದು ಗುರುತ್ತಿಲಾಗಿದ್ದು ಆತ ಪಕ್ಕದಲ್ಲೇ ಅಂಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.
ಪೊಲೀಸರಿಗೆ ಶರಣಾದ ಆರೋಪಿ ಅನ್ವಾರ್ :
ಜನನಿಬಿಡ ಬಸ್ ನಿಲ್ದಾಣದಲ್ಲೇ ಸಾರ್ವಜನಿಕರ ಕಣ್ಣೆದುರೇ ಕೃತ್ಯ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಜವ್ವಾರ್ ಅಲ್ಲಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
