BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ಉಡುಪಿ

Bengaluru Heavy rains to lash Karnataka for next 4 days; High alert in coast including Dakshina Kannada...! ಕರ್ನಾಟಕದಲ್ಲಿ ಮುಂದಿನ 4 ದಿನ ವರುಣನ ಅಬ್ಬರ, ದ.ಕ ಸೇರಿ ಕರಾವಳಿಯಲ್ಲಿ ಹೈ ಅಲರ್ಟ್..!

Heavy rains to lash Karnataka for next 4 days; High alert in coast including Dakshina Kannada...!  

ಬೆಂಗಳೂರು : ಬರ ಛಾಯೆಯಲ್ಲಿರುವ  ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಗೆ ಮತ್ತೆ ಮರುಜೀವ ಬಂದಿದ್ದು, ಜುಲೈ 6 ರಿಂದ ನಾಲ್ಕು ದಿನ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರವು ಜುಲೈ 6 ರಿಂದ 9 ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆ, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜುಲೈ  8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್​ ಘೋಷಿಸಲಾಗಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ. ತಗ್ಗು ಪ್ರದೇಶಗಳು ಹಾಗೂ ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.  ಕರ್ನಾಟಕ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮುನ್ಸೂಚನೆ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚಿಸಿದೆ. ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆಗಳನ್ನು ನಿರಂತರವಾಗಿ ಗಮನಿಸುವಂತೆ, ಭಾರೀ ಮಳೆಯ ಸಂದರ್ಭಗಳಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಐಎಂಡಿ ಮನವಿ ಮಾಡಿದೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!