ಬೆಂಗಳೂರು, ಜುಲೈ 06 : ತಾಂತ್ರಿಕ ಸಮಸ್ಯೆಗಳು ಮತ್ತು ದಾಖಲೆಗಳನ್ನು ಸಲ್ಲಿಸುವಲ್ಲಿನ ವಿಳಂಬದಿಂದಾಗಿ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳ ಮನವಿಗೆ ಸಿಎಂ ಡಿ ಕೆ ಶಿವಕುಮಾರ್ ಸ್ಪಂದಿಸಿದ್ದಾರೆ.
ತಾಂತ್ರಿಕ ಸಮಸ್ಯೆಗಳು ಮತ್ತು ದಾಖಲೆಗಳನ್ನು ಸಲ್ಲಿಸುವಲ್ಲಿನ ವಿಳಂಬದಿಂದಾಗಿ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳ ಮನವಿಗೆ ಮುಖ್ಯಮಂತ್ರಿ ಡಿ ಕೆ ಶಿವ ಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರವು 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಅರ್ಜಿ ಅವಧಿಯನ್ನು ವಿಸ್ತರಿಸಲು ನಿರ್ಧರಿಸಿದೆ.
ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು 08.07.2026 ರ ಸಂಜೆ 4 ಗಂಟೆಯವರೆಗೆ ವಿಸ್ತರಿಸಲಾಗಿದೆ.