BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ದೇಶ

Bengaluru ದುರಂತ ಅಂತ್ಯ ಕಂಡ ಮಳೆಯ ಲಿವ್-ಇನ್ ರಿಲೇಶನ್‌, ಸಾವಿಗೂ ಮುನ್ನ ವಿಡಿಯೋ ಸಂದೇಶ

ಬೆಂಗಳೂರು, ಜುಲೈ 06 : ಲಿವ್-ಇನ್ ರಿಲೇಶನ್‌ ಇಟ್ಟುಕೊಂಡಿದ್ದ ಮಹಿಳೆಯೊಬ್ಬಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೀವಾಂತ್ಯ ಮಾಡಿಕೊಂಡಿದ್ದಾಳೆ. ಪಶ್ಚಿಮ ಬಂಗಾಳ ಮೂಲದ ಮೌಮಿತಾ ಬೋಸ್ ಜೀವಾಂತ್ಯ ಮಾಡಿಕೊಂಡ ಮಹಿಳೆಯಾಗಿದ್ದಾಳೆ.



37 ವರ್ಷದ ಮೌಮಿತಾ ಅವರು ಆ‌ರ್.ಟಿ.ನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ದಾಖಲಿಸಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೌಮಿತಾ ಬೋಸ್ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು 10 ವರ್ಷಗಳಿಂದ ಅಮ್ಮದ್ ಪಾಷಾ ಎಂಬಾತನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು,ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!