BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ರಾಜ್ಯ

Bengaluru ಅಶ್ಲೀಲ ಮೆಸೇಜ್, ವಿಡಿಯೋ ಕಾಲ್ ಮೂಲಕ ಕಿರುಕುಳ, ವಿಕೃತ ಕಾಮಿಯ ಚಳಿ ಬಿಡಿಸಿದ ಸಂತ್ರಸ್ಥೆ ..!

 ಬೆಂಗಳೂರು, ಜುಲೈ 01 : ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮಿಯ ಚಳಿ ಬಿಡಿಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.


 ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡಿ ಪೀಡಿಸುತ್ತಿದ್ದ ವಿಕೃತ ಕಾಮಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಥಳಿಸಿ ಬುದ್ದಿ ಕಲಿಸಿದ್ದಾರೆ.  ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಮಹಿಳೆಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಹಿತಿಯ ಪ್ರಕಾರ, ಬೆಂಗಳೂರಿನ ಈ ವ್ಯಕ್ತಿ ಹಲವಾರು ಮಹಿಳೆಯರ ಮೊಬೈಲ್ ಸಂಖ್ಯೆಯನ್ನು ಹೇಗೋ ಪಡೆದು ಪದೇ ಪದೇ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಅದು ಕೇವಲ ಮೆಸೇಜ್‌ಗಳಿಗೆ ಸೀಮಿತವಾಗದೇ, ವಿಡಿಯೋ ಕಾಲ್ ಮಾಡಿ ಮಹಿಳೆಯರನ್ನು ಮಾನಸಿಕವಾಗಿ ಪೀಡಿಸುತ್ತಿದ್ದ. ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಒತ್ತಾಯಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಹಿನ್ನಲೆಯಲ್ಲಿ ಈತನ ಕೃತ್ಯಕ್ಕೆ ಮಹಿಳೆಯರು ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಈತನ ವಿಕೃತ ವರ್ತನೆಯಿಂದ ಬೇಸತ್ತ ಸಂತ್ರಸ್ಥೆಯೋರ್ವಳು ಈತನಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ. ತಮ್ಮ ಕೆಲವು ಪರಿಚಿತರು ಮತ್ತು ಸಂಗಡಿಗರ ಸಹಾಯದಿಂದ ಆತನನ್ನು ನೇರವಾಗಿ ಭೇಟಿ ಮಾಡಿ ರೆಡ್‌ಹ್ಯಾಂಡ್ ಆಗಿ ಹಿಡಿದು ತರಾಟೆಗೆ ತೆಗೆದುಕೊಂಡು ಚಪ್ಪಲಿಯಿಂದ ಥಳಿಸಿದ್ದಾರೆ.  

ಸಾರ್ವಜನಿಕ ವಲಯದಲ್ಲಿ ನಡೆದ ಈ ಘಟನೆ ಇದೀಗ ಇಂಟರ್ನೆಟ್‌ನಲ್ಲಿ ಭಾರೀ ವೈರಲ್ ಆಗಿದ್ದು, ಅನೇಕರು ಮಹಿಳೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.  

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!