ಮಂಗಳೂರು, ಜುಲೈ 29: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾನೆಂದು ಆರೋಪಿಸಲಾದ ಬಾಂಗ್ಲಾದೇಶದ ಪ್ರಜೆಗಳ ಕುರಿತು ಸಂಬಂಧಿತ ದಾಖಲೆಗಳೊಂದಿಗೆ ಪೊಲೀಸರಿಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರ್ತ ಡಾ. ಟಿ. ನಾಗೇಂದ್ರಪ್ಪ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿ ಬಂಧಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ.
ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪೊಲೀಸ್ ಇಲಾಖೆಯ ಕ್ರಮದ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿರುವುದರ ಜೊತೆಗೆ, ಅಕ್ರಮ ವಲಸೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಎಚ್ಚರಿಕೆಯಿಂದ ಹಾಗೂ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಬೇಕೆಂಬ ಸಂದೇಶ ನೀಡಿದ್ದಾರೆ ಎಂದು ವರದಿಯಾಗಿದೆ.
82 ಕೋ. ರೂ. ಮೌಲ್ಯದ ಮಾದಕ ಪದಾರ್ಥಗಳನ್ನು ನಾಶ ಮಾಡಿದ ಮಂಗಳೂರು ಪೊಲೀಸರು..!
ಅಕ್ರಮ ವಲಸಿಗರ ವಿರುದ್ಧ ಕಾನೂನುಬದ್ಧ ಮಾಹಿತಿ ನೀಡುವ ಭಾರತೀಯ ನಾಗರಿಕರನ್ನೇ ಪ್ರಕರಣಗಳಲ್ಲಿ ಸಿಲುಕಿಸುವುದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಮುಂದುವರಿಯದಂತೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಂಡು, ಅಕ್ರಮ ವಲಸೆಯ ವಿರುದ್ಧ ಕಠಿಣ ನಿಲುವು ತಾಳಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಆಗ್ರಹಿಸುತ್ತದೆ.
