BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ರಾಜ್ಯ

Chikkaballapura ಕೌಟುಂಬಿಕ ಕಲಹಕ್ಕೆ ಇಬ್ಬರ ಮರ್ಡರ್ , ಆರೋಪಿ ಪೊಲೀಸರಿಗೆ ಶರಣು

ಚಿಕ್ಕಬಳ್ಳಾಪುರ, ಜುಲೈ 07 : ಕೌಟುಂಬಿಕ ಕಲಕ್ಕೆ ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಬಳಿಕ ಆರೋಪಿ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. 


ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲನಿಯಲ್ಲಿಈ ಘಟನೆ ಸೋಮವಾರ ನಡೆದಿದ್ದು ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಹತ್ಯೆ ಮಾಡಿದ್ದಾನೆ. 

ಏಜಾಝ್ (30) ಕೊಲೆ ಆರೋಪಿಯಾಗಿದ್ದು, ಪತ್ನಿ ಶಮಾ (25) ಹಾಗೂ ಆಕೆಯ ತಂಗಿ ರೇಷ್ಮಾ(18) ಕೊಲೆಯಾದ ನತದೃಷ್ಟರಾಗಿದ್ದಾರೆ.  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಕೆಲವು ತಿಂಗಳುಗಳಿಂದ ದಂಪತಿಯ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು. ರವಿವಾರ ರಾತ್ರಿ ಪತ್ನಿಯ ಮನೆಗೆ ಬಂದಿದ್ದ ಏಜಾಝ್‌ನೊಂದಿಗೆ ಮತ್ತೆ ಜಗಳವಾಗಿದೆ ಎನ್ನಲಾಗಿದೆ. ಸೋಮವಾರ ಮುಂಜಾನೆ ಅದು ವಿಕೋಪಕ್ಕೆ ತಿರುಗಿದ ವೇಳೆ ಇಬ್ಬರ ಮೇಲೂ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಆರೋಪಿ ತನ್ನ ಮೂವರು ಮಕ್ಕಳನ್ನು ಕರೆದುಕೊಂಡು ಕೋಲಾರಕ್ಕೆ ತೆರಳಿ, ಮಕ್ಕಳನ್ನು ಮನೆಯಲ್ಲಿ ಬಿಟ್ಟು ಗಲ್‌ಪೇಟೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸಹಿತ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!