BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ರಾಜ್ಯ

ಚಿಕ್ಕಮಗಳೂರು ಬೈಕ್‌ಗೆ ಸೈಡ್ ಕೊಡುವ ಭರದಲ್ಲಿ ಪಲ್ಟಿಯಾದ ಕಾರು, ಪ್ರಯಾಣಿಕರು ಪಾರು

ಚಿಕ್ಕಮಗಳೂರು : ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್‌ಗೆ ಸೈಡ್ ಕೊಡುವ ಭರದಲ್ಲಿ ಕಾರೋಮದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಕಾಫಿ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಕಳಸದಲ್ಲಿ ನಡೆದಿದೆ.



ಅದೃಷ್ಟವಶತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಕಾಫಿ ತೋಟಕ್ಕೆ ಉರುಳಿ ಬಿದ್ದಿದೆ. ಕಳಸ ತಾಲೂಕಿನ ಬೈನೇಕಾಡು ಹೋಮ್ ಸ್ಟೇ ಬಳಿ ಈ ದುರ್ಘಟನೆ ಸಂಭವಿಸಿದೆ.

ಹೊರನಾಡಿನಿಂದ ಉಡುಪಿ ಕಡೆ ಹೊರಟಿದ್ದ ವ್ಯಾಗನರ್‌ ಕಾರು, ಎದುರಿನಿಂದ ಬಂದ ಬೈಕ್‌ಗೆ ಸೈಡ್ ಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿರಂತರ ಮಳೆಯಿಂದ ನೆನೆದಿದ್ದ ರಸ್ತೆಯ ಬದಿಗೆ ಕಾರು ಇಳಿಯುತ್ತಿದ್ದಂತೆ ಸ್ಕಿಡ್ ಆಗಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!