BREAKING
ಉಡುಪಿ

DasaraKambala ಮೈಸೂರು ದಸರಾದಲ್ಲಿ ಕಂಬಳಕ್ಕೆ ಪರ ವಿರೋಧ, ಯದುವೀರ್ ಬೆನ್ನಲ್ಲೇ ಹೆಚ್‌ಡಿ ಕುಮಾರ ಸ್ವಾಮೀ ಆಕ್ಷೇಪ


ಮೈಸೂರು, ಜುಲೈ 11 : ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸುವ ವಿಚಾರದ ಕುರಿತು ಪರ-ವಿರೋಧ ಚರ್ಚೆಗಳು ರಾಜ್ಯದಲ್ಲಿ ಜೋರಾಗಿಯೇ ನಡೆಯುತ್ತಿದೆ. ಸಚಿವ ಯುಟಿ ಖಾದರ್ ಸೇರಿದಂತೆ ಅನೇಕರು ಕಂಬಳ ಆಯೋಜನೆ ಮಾಡುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ರಾಜ್ಯ ಕಂಬಳ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಕಂಬಳ ಆಯೋಜನೆಯನ್ನು ಸ್ವಾಗತಿಸಿದ್ದಾರೆ. ಆದರೆ ಸಂಸದ ಯದುವೀರ್ ಒಡೆಯರ್ ಸಂಪ್ರಾದಾಯಿಕ ದಸರಾ ಉತ್ಸವದಲ್ಲಿ ಕಂಬಳ ಆಯೋಜನೆ ಸಲ್ಲದು ಎಂದು ವಿರೋಧ ವ್ಯಕ್ತಪಡಿಸಿದ್ದು ಇದಕ್ಕೆ ಮಾಜಿ ಸಿಎಂ, ಕೆಂದ್ರ ಸಚಿವ ಹೆಚ್‌ ಡಿ ಕುಮಾರ ಸ್ವಾಮೀ ಕೂಡ ಧ್ವನಿಗೂಡಿಸಿದ್ದು ದಸರಾದಲ್ಲಿ ಕಂಬಳ ಸೇರ್ಪಡೆ ವೀರೋಧಿಸಿದ್ದಾರೆ.  ಎಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಎಕ್ಸ್​ ಖಾತೆಯಲ್ಲಿ ಪೋಸ್ಟ್​​ ಕೂಡ ಹಂಚಿಕೊಂಡಿದ್ದಾರೆ.ಅವರ ಪೋಸ್ಟ್ ಸಾರಾಂಶ ಹೀಗಿದೆ

ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ.ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು.

ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ ಎಂದಿದ್ದಾರೆ

https://x.com/hd_kumaraswamy/status/2075847613212250249?s=20

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!