BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Karkala police Suspend ಹಣದ ಬೇಡಿಕೆ, DYSP ಸೇರಿ ಕಾರ್ಕಳದ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು..!


ಉಡುಪಿ, ಜುಲೈ 30: ಉಡುಪಿ ಜಿಲ್ಲೆ ಕಾರ್ಕಳದ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಈ ಮೂವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿ ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆರೋಪಗಳ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ಪ್ರಾಥಮಿಕ ತನಿಖೆಯ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.ಅಮಾನತುಗೊಂಡವರಲ್ಲಿ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಸೇರಿದ್ದಾರೆ.

ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೊಗಳು ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಅದರ ಆಧಾರದ ಮೇಲೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಬಾಕಿ ಇರುವವರೆಗೆ ಅಮಾನತು ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!