ಬೆಂಗಳೂರು, ಜುಲೈ 10 : ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದು ಶುಕ್ರವಾರ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಳೆಯ ಜೊತೆ ಗಾಳಿಯೂ ಹೆಚ್ಚಾಗಿದ್ದು ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಜು. 11 ರಿಂದ ಮಳೆ ಪ್ರಮಾಣ ಕೊಂಚ ಇಳಿಕೆಯಾಗುವ ಸಾಧ್ಯತೆ ಇದೆ.
