ಬೆಂಗಳೂರು, ಜುಲೈ 06 : ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಎನ್‌ಡಿಎ ನಿಯೋಗ ಸೋಮವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಅಧೀಕೃತವಾಗಿ ದೂರು ನೀಡಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳ ಬಗ್ಗೆ ಎನ್‌ಡಿಎ ನಾಯಕರ ನಿಯೋಗ ಗಂಭೀರ ಕಳವಳ ವ್ಯಕ್ತಪಡಿಸಿದೆ.SIR ನಡೆಸಬೇಕಾದ ಅಧಿಕಾರಿಗಳು ಅನುಮೋದಿತ ಪ್ರಕ್ರಿಯೆಯ ಬಗ್ಗೆ ಶೂನ್ಯ ಗೌರವ ತೋರಿಸುತ್ತಿದ್ದಾರೆ, ಇದರಿಂದಾಗಿ ಪ್ರಜಾಪ್ರಭುತ್ವದ ಚೈತನ್ಯವನ್ನೇ ಹಾಳು ಮಾಡುತ್ತಿದ್ದಾರೆ" ಎಂದು ನಾಯಕರು ಮುಖ್ಯ ಚುನಾವಣಾಧಿಕಾರಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಚುನಾವಣಾ ಅಧಿಕಾರಿ (DEO/DC) ನಿರ್ದೇಶನದ ಮೇರೆಗೆ ಬೂತ್ ಮಟ್ಟದ ಅಧಿಕಾರಿಗಳು (BLOಗಳು) SIR ಮಾರ್ಗಸೂಚಿಗಳ ಪ್ರಕಾರ ಕಡ್ಡಾಯವಾಗಿ ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸಬೇಕು ಮತ್ತು ಪ್ರತಿ ಮನೆಯ ಸದಸ್ಯರ ಗುರುತನ್ನು ವೈಯಕ್ತಿಕವಾಗಿ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಂದಿದ್ದಾರೆ.
ದೂರು ನೀಡಿದ ನೀಯೋಗದಲ್ಲಿ ಕೇಂದ್ರ ಸಚಿವರುಗಳಾದ ಪ್ರಹ್ಲಾದ್ ಜೋಶಿ, ಹೆಚ್‌ಡಿ ಕುಮಾರ ಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್.ಅಶೋಕ್, ಪ್ರಮುಖರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ, ಅಶ್ವಥ್ ನಾರಾಯಣ, ಸಂಸದ ಕಾರಜೋಳ ಅವರು ಇದ್ದರು.
