ಕಾರವಾರ, ಜುಲೈ 05 : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮಂಕಿ ಪೊಲೀಸ್ ಠಾಣಾ ಎಸ್‌ಐ ಅವರು ಬಂಧಿಸಲಾಗಿದೆ. ಅಭಿನಂದನ್ ಗೌಡ ಬಂಧಿತ ಪೊಲೀಸ್ ಅಧಿಕಾರಿಯಾಗಿದ್ದಾನೆ.
ಯಲ್ಲಾಪುರ ಮೂಲದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಅಭಿನಂದನ ಗೌಡ ಮೇಲಿದೆ. ಅಪ್ರಾಪ್ತ ಬಾಲಕಿಯು ನೀಡಿದ ದೂರಿನ ಮೇರೆಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು ಅಭಿನಂದನ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವೇ ತಿಂಗಳ ಹಿಂದಷ್ಟೇ ಅಭಿನಂದನ್ ವರ್ಗಾವಣೆಗೊಂಡು ಮಂಕಿ ಪೊಲೀಸ್ ಠಾಣೆಗೆ ಬಂದಿದ್ದ.
ಪ್ರಕರಣ ದಾಖಲಾದ ಬಳಿಕ ಪೊಲೀಸರು ಆರೋಪಿ ಪಿಎಸ್‌ಐಯನ್ನು ವಶಕ್ಕೆ ಪಡೆದು ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಘಟನೆಯು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಕಾನೂನು ರಕ್ಷಕನೇ ಭಕ್ಷಕನಾದ ಈ ಆಘಾತಕಾರಿ ಘಟನೆ ಸಾರ್ವಜನಿಕ ವಲಯದಲ್ಲಿಯೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ.