ಕಾರವಾರ, ಜುಲೈ 04 : ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಆರೋಗ್ಯ ಸಚಿವರಾದ ಯು ಟಿ ಖಾದರ್ ಅವರು ಬೆಳ್ಳಂಬೆಳಗ್ಗೆ ಕುಮಟಾ ತಾಲೂಕು ಆಸ್ಪತ್ರೆಗೆ ಢಿಡೀರ್ ಭೇಟಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ಆರೋಗ್ಯ ಸಚಿವರು ಶನಿವಾರ ಬೆಳ್ಳಂಬೆಳಗ್ಗೆ ಜಿಲ್ಲೆಯ ಕುಮಟಾ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಸೌಲಭ್ಯಗಳು ಮತ್ತು ಆರೋಗ್ಯ ಸೇವೆಗಳ ಸ್ಥಿತಿಗತಿಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿದರು. ಪ್ರತಿಯೊಬ್ಬ ಜನಸಾಮಾನ್ಯರಿಗೆ ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆ ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಅವರು ಈ ಭೇಟಿ ಕೈಗೊಂಡಿದ್ದಾರೆ. ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬಂದಿಗಳು ಹಾಗೂ ರೋಗಿಗಳೊಂದಿಗೆ ಮಾತುಕತೆ ನಡೆಸಿ ವ್ಯವಸ್ಥೆ ಹಾಗೂ ಪ್ರಗತಿಯ ಕುರಿತು ಸಮಗ್ರ ಪರಿಶೀಲನೆ ಮಾಡಿದರು. ಈ ಸಂದರ್ಭ ಕುಮಟಾ ಶಾಸಕರಾದ ದಿನಕರ್ ಶೆಟ್ಟಿ ಮತ್ತು ಭಟ್ಕಳ ಶಾಸಕರಾದ ಮಂಕಲ್ ವೈದ್ಯ ಮತ್ತು ಮಾಜಿ ಕುಮಟಾ ಶಾಸಕರಾದ ಶಾರದಾ ಮೋಹನ್ ಶೆಟ್ಟಿ , ಹಿರಿಯ ವೈಧ್ಯಾಧಿಕಾರಿಗಳು ಉಪಸ್ಥಿತರಿದ್ದರು

.jpeg)