ಮಂಗಳೂರು,ಜುಲೈ 17 : ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾರ್ಥಮಿಕ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ಶನಿವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Mangaluru ಭಾರಿ ಮಳೆ ಮುನ್ಸೂಚನೆ, ಜುಲೈ 18 ರಂದು ದ.ಕ.ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಸುದ್ದಿವಾಣಿ
7/17/2026 10:35:00 PM
ಟ್ಯಾಗ್ಗಳು:
ದಕ್ಷಿಣ ಕನ್ನಡ