BREAKING
ದಕ್ಷಿಣ ಕನ್ನಡ

Mangaluruಸಿಸಿಬಿ ಪೋಲೀಸರ ಭರ್ಜರಿ ಬೇಟೆ,5.20 ಕೋಟಿ ಮೌಲ್ಯದ 5.196 Kg MDMA ವಶ..!!


ಮಂಗಳೂರು,ಜುಲೈ 16 : ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಡೃಗ್ಸ್ ಜಾಲಾದ ಬೆನ್ನತ್ತಿ ಹೋದ ಸಿಸಿಬಿ ಪೊಲೀಸ್ ತಂಡ ಇಬ್ಬರು ಆರೋಪಿಗಳನ್ನು ಬಾಗಲಕೋಟೆಯಲ್ಲಿ ಬಂಧಿಸಿದ್ದುಬಂಧಿತರಿಂದ ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ 5.196 ಕಿಲೋಗ್ರಾಂ ನಿಷೇಧಿತ ಮಾದಕ ದೃವ್ಯ MDMA ಪದಾರ್ಥವನ್ನು ವಶಪಡಿಸಿಕೊಂಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ  ಇಂದಬೆಟ್ಟು ನಿವಾಸಿ ಮುಹಮ್ಮದ್ ಅಲ್ಫಾಝ್ (28) ಹಾಗೂ ಉಜಿರೆಯ ಹಳೆಪೇಟೆ ಲಾಯಿಲಾ ವಿವೇಕಾನಂದ ನಗರದ ಮುಹಮ್ಮದ್ ಮುಸ್ತಫಾ (28) ಬಂಧಿತ ಆರೋಪಿಗಳಾಗಿದ್ದಾರೆ.  ಬಂಧಿತರಿಂದ ಮಾದಕ ಪದಾರ್ಥ MDMA ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಮಾದಕ ದೃವ್ಯ ನೆರೆಯ ಕೇರಳ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಮಾರಾಟ ಮಾಡಲು ಸಿದ್ದತೆ ನಡೆಸಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತರಾದ ಸುದೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.  


 ಡ್ರಗ್ಸ್ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ನಗರ ಪೊಲೀಸರ  ಕಾರ್ಯಾಚರಣೆ ಮುಂದುವರಿದಿದೆ. ಈ ಸಂದರ್ಭ ಕೆಲ ದಿನಗಳ ಹಿಂದೆ ಅಣ್ಣಪ್ಪಸ್ವಾಮಿ ಎಂಬ ಡ್ರಗ್ಸ್ ಪೆಡ್ಲರನ್ನು ಪೊಲೀಸರು ಬಂಧಿಸಿದ್ದರು. ಆತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆದು  ತೀವ್ರವಾಗಿ ವಿಚಾರಣೆ ಮಾಡಿದಾಗ ಈ ಬೃಹತ್ ಜಾಲ ಪತ್ತೆಯಾಗಿದೆ. ಬಂಧಿತ ಆರೋಪಿಗಳು ದೆಹಲಿಯಿಂದ ಎಂಡಿಎಂಎ  ಖರೀದಿಸಿ ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬಾಗಲಕೋಟೆ ಜಿಲ್ಲೆಯ ಹುನಗುಂದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಗೆ ಸಿಸಿಬಿ ಪೊಲಿಸರ ಬಲೆಗೆ ಬಿದ್ದಿದ್ದಾರೆ. 

ಆರೋಪಿ ಅಲ್ಫಾಝ್  ವಿರುದ್ದ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಇದೇ ಪದಾರ್ಥ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕುಮಾರ್, ಡಿಸಿಪಿಗಳಾದ ರವಿಶಂಕರ್ ಹಾಗೂ ಮಿಥುನ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!