BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru attack ಮಂಗಳೂರು ನಗರದಲ್ಲಿ ಹಾಡು ಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ.!


ಮಂಗಳೂರು,ಜುಲೈ25: ಮಂಗಳೂರು ನಗರದಲ್ಲಿ ಹಾಡು ಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ.  ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಈ ಘಟನೆ ನಡೆದಿದೆ. ರೌಡಿ ಶೀಟರ್ ವಿಖ್ಯಾತ್ @ ವಿಕ್ಕಿ ಬಪ್ಪಲ್ ತಲವಾರು ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಈತ ಮಾದಕವಸ್ತು ಮಾರಾಟದ ಕಾರಣಕ್ಕೆ ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಬೇರೊಂದು ಬೈಕಿನಲ್ಲಿ ಹಿಂಬಾಲಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ದಾಳಿಯಿಂದ ವಿಕ್ಕಿ ಬಪ್ಪಲ್ ನ ಕುತ್ತಿಗೆಯ ಬಳಿ ಆಳವಾದ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!