Mangaluru Birth anniversary of the great social reformer Kudmul Ranga Rao
ಮಂಗಳೂರು, ಜುಲೈ 05 : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಹಾಗೂ ರಾಷ್ಟ್ರೀಯ–ರಾಜ್ಯ ಮಟ್ಟದ ನಾಯಕರಿಗೆ ಅಭಿನಂದನಾ ಸಮಾರಂಭ ಭಾನುವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮಲ್ಲಿಕಟ್ಟೆಯಲ್ಲಿ ನಡೆಯಿತು .
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ)ದ ವತಿಯಿಂದ ಮಹಾನ್ ಸಮಾಜ ಸುಧಾರಕ, ಶಿಕ್ಷಣದ ಹರಿಕಾರ, ದಲಿತೋದ್ಧಾರದ ಮುಂಚೂಣಿ ನಾಯಕ ಹಾಗೂ ಸಾಮಾಜಿಕ ಸಮಾನತೆಯ ಮಹಾನ್ ಚಿಂತಕರಾದ ಪೂಜನೀಯ ಕುದ್ಮುಲ್ ರಂಗರಾವ್ ಅವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ವೈಭವಯುತವಾಗಿ ಅಂಗವಾಗಿ ಭಾನುವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು
ಸಮಾಜದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಬೆಳಕನ್ನು ಹರಡಿದ ಕುದ್ಮುಲ್ ರಂಗರಾವ್ ಅವರ ಆದರ್ಶಗಳನ್ನು ಸ್ಮರಿಸುತ್ತಾ, ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ಕಾಲೇಜು ಬ್ಯಾಗ್‌ಗಳ ವಿತರಣೆ ನಡೆಯಿತು. ಇದರೊಂದಿಗೆ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಗಣ್ಯ ನಾಯಕರಿಗೆ ಅಭಿನಂದನಾ ಸಮಾರಂಭವೂ ಜರಗಿತು.
ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗ ರಾಜ್ಯಾಧ್ಯಕ್ಷರಾದ ಆರ್ ಧರ್ಮಸೇನ್ ರವರು ದ.ಕ. ಜಿಲೆಯಲ್ಲಿ ಯಾರೂ ಊಹಿಸದ ರೀತಿಯಲ್ಲಿ ತಳಸನುದಾಯವನ್ನು ಅಪ್ಪಿಕೊಂಡು ಸಮಾಜದ ಸನ್ಮಾರ್ಗವನ್ನು ತೋರಿಸಿ, ಮಹಾತ್ಮ ಗಾಂಧೀಜಿಯೇ ಸ್ವತಃ ಗುರುಗಳ ಎಂದು ಘೋಷಿಸಿದ ಮಹಾತ್ಮರೇ ಪೂಜ್ಯನೀಯ ಕುದ್ಮುಲ್ ರಂಗರಾಯರು. ಕಾಂಗ್ರೆಸ್ ಪಕ್ಷ ಯಾವತ್ತೂ ಇವರ ತತ್ವ ಆದರ್ಶದಲ್ಲೇ ಅವರು ಹಾಕಿ ಕೊಟ್ಟ ದಾರಿಯಂತೆ ನಡೆಯಲಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಪರಿಶಿಷ್ಟ ಘಟಕ 500 ವಿದ್ಯಾರ್ಥಿಗಳಿಗೆ ಬ್ಯಾಕ್ ಹಾಗೂ ಅತೀ ಹೆಚ್ಚು ಅಂಕ ಗಳಿಸಿದ 30 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಉತ್ತಮ ಕಾರ್ಯವನ್ನು ಮಾಡಿದೆ ಎಂದು ಹೇಳಿದರು.
ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಭಾಗವಹಿಸಿದರು.
ಈ ಕಾರ್ಯಕ್ರಮವು ಕೇವಲ ಜಯಂತಿ ಆಚರಣೆಯಾಗಿರದೆ, ಶಿಕ್ಷಣ, ಸಾಮಾಜಿಕ ನ್ಯಾಯ, ಸಮಾನ ಅವಕಾಶ ಮತ್ತು ಸಮಾಜದ ಸಬಲೀಕರಣದ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಜನಪರ ಅಭಿಯಾನವಾಗಿದ್ದು, ಕುದ್ಮುಲ್ ರಂಗರಾವ್ ಅವರ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ವೇದಿಕೆಯಾಗಲಿ ಎಂದು ಕೆಪಿಸಿಸಿ ಕಾರ್ಯಧ್ಯಕ್ಷರಾದ ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಬಂಡಾರಿ ರವರು ಹೇಳಿದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಸಚಿವ ಬಿ ರಮಾನಾಥ್ ರೈ ಮಾತನಾಡಿದರು,
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ನಿಗಮ-ಮಂಡಳಿಗಳ ನಾಮನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಚುನಾವಣಾ ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು, ವಿದ್ಯಾರ್ಥಿಗಳು ಭಾಗವಹಿಸಿದರು. ದ ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ *ದಿನೇಶ್ ಮುಳೂರು ರವರು ಪ್ರಸ್ತವಿಕ ಬಾಷಣ ಮಾಡಿದರು, ವಿಧಾನ ಪರಿಷತ್ ಶಾಸಕರು ಐವನ್ ಡಿ ಸೋಜಾ, ಜಿ ಕೃಷ್ಣಪ್ಪ, ಏನ್ ಬಸವರಾಜ್, ಡಾ! ನಾಯಕ್ ರೂಪ್ ಸಿಂಗ್, ಕಾಣಿರಂ ರಾಠೋಡ್, ರಂಗನಾಥ್ ಪ್ರಸಾದ್, ಸಂತೋಷ್, ಸಾರಿಕಾ ಪೂಜಾರಿ, ಮಾಜಿ ಕಾರ್ಪರೇಟರ್ ನಾಗವೇಣಿ, ವಿಜಯಲಕ್ಷ್ಮಿ, ಸುಭಾಸ್ ಕೊಲ್ನಾಡ್, ಸೋಹನ್ ಆಳ್ವಾ, ಪ್ರೇಮ್ ಬಲ್ಲಾಳ್ ಭಾಗ್ ಸ್ವಾಗತಿಸಿದರು, ರೋಹಿತ್ ಉಳ್ಳಾಲ್ ಕಾರ್ಯ ನಿರೂಪಣೆಗೈದರು, ಗೌತಮ್ ಧನ್ಯವಾದ ಸಲ್ಲಿಸಿದರು,

