ಮಂಗಳೂರು, ಜುಲೈ04 : ಕರಾವಳಿಯಲ್ಲಿ ಮಳೆಯಬ್ಬರ ಜೋರಾಗಿಯೇ ಇದೆ. ಭಾರಿ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೇಕ ಸಮಸ್ಯೆಗಳು ಎದುರಾಗುತ್ತಿದ್ದು ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.
ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.