BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ದಕ್ಷಿಣ ಕನ್ನಡ

Mangaluru Kudmul Ranga Rao's tomb development must be carried out by MUDA itself ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ ; ಕಾಮತ್

ಮಂಗಳೂರು, ಜುಲೈ 05 : ಮಂಗಳೂರು ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃ್ದಿ ಕಾರ್ಯ ಮುಡಾ ವತಿಯಿಂದಲೇ ನಡೆಯಲಿ ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. 



 ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. 


ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ದಾರಕ, ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಮೂಲಕ 3 ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ನಂತರ ಅದರ ಗುದ್ದಲಿ ಪೂಜೆಯನ್ನೂ ಸಹ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಸರ್ಕಾರ ಬದಲಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ಅನುದಾನವನ್ನು ರದ್ದುಗೊಳಿಸಿರುವುದು ಖಂಡನೀಯ ಹಾಗೂ ಬೇಸರದ ಸಂಗತಿ. ಅಲ್ಲದೇ ಪ್ರಸ್ತುತ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ಅನುದಾನವೂ ನೀಡುತ್ತಿಲ್ಲ. ಪರಿಶಿಷ್ಟ ವರ್ಗದ ಬಂಧುಗಳಿಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದ ಆ ಮಹಾತ್ಮರ ಸಮಾಧಿಯ ಅಭಿವೃದ್ಧಿಗೆ ಹಿನ್ನಡೆಯಾಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಕೂಡಲೇ ಮುಡಾ ವತಿಯಿಂದಲೇ 3 ಕೋಟಿ ಅನುದಾನವನ್ನು ಹೊಂದಿಸಿಕೊಂಡು ಯೋಜನೆ ಪೂರ್ಣಗೊಳಿಸುವಂತೆ ಶಾಸಕರು ಆಗ್ರಹಿಸಿದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!