ಮಂಗಳೂರು, ಜುಲೈ 31: ಬಿಜೆಪಿ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಎಡಿಟ್ ಮಾಡಿ ಅವಹೇಳನ ಬರಹಗಳ ಪ್ರಕಟಿಸಿರುವ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ದೂರು ದಾಖಲಾಗಿದೆ. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಪ್ರಕೋಷ್ಟ ವತಿಯಿಂದ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಲಾಗಿದೆ.
ಬಿಜೆಪಿ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಎಡಿಟ್ ಮಾಡಿ ಅವಹೇಳನ ಬರಹಗಳ ಪ್ರಕಟಿಸಿರುವ ಕೆಲವೊಂದು ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ಈ ದೂರು ಸಲ್ಲಿಕೆಯಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಶ್ರೀಧರ್ ಶೆಟ್ಟಿ ಪುಳಿಂಚ, ಸಹ ಸಂಚಾಲಕರಾದ ಪ್ರಮೋದ್ ಪೂಜಾರಿ ಕೆರ್ವಾಶೆ, ಜಿಲ್ಲಾ ಸಮಿತಿ ಸದಸ್ಯರಾದ ವೇಣು ಕುಮಾರ್, ಶ್ರೀಧರ್ ಸುವರ್ಣ, ಕುಮಾರಿ ಅಕ್ಷತಾ, ಮಂಗಳೂರು ಮಂಡಲ ಸಂಚಾಲಕರಾದ ಬಾಲಕೃಷ್ಣ ಉಳ್ಳಾಲ ಬೈಲು, ಸಹ ಸಂಚಾಲಕರಾದ ಅಭಿಲಾಶ್ ಶಾಸ್ತ್ರಿ ಉಪಸ್ಥಿತರಿದ್ದರು.