BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Mangaluru ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಚುನಾವಣೆ ಶ್ಯಾಮಲಾ ಭಂಡಾರಿ ಕುಂದಾಪುರ ಜಯಭೇರಿ


ಮಂಗಳೂರು, ಜುಲೈ 10 :  ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ಇದಕ್ಕೆ ನಡೆದ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಕುಂದಾಪುರ ಜಯಗಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಇತಿಹಾಸದಲ್ಲೇ ಮಹಿಳೆಯೊಬ್ಬರು ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿ ಆಯ್ಕೆಯಾದದ್ದು ಇದೆ ಮೊದಲ ಬಾರಿಯಾಗಿದೆ

ಹಿರಿಯ ವಕೀಲರಾಗಿರುವ ಶ್ಯಾಮಲಾ ಭಂಡಾರಿ ಕುಂದಾಪುರ ಅವರು ಸಾಮಾಜಿಕ ಹೋರಾಟಗಳ  ಮೂಲಕ ಮಹಿಳಾ ರಾಜಕಾರಣದಲ್ಲಿ, ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!