BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ದಕ್ಷಿಣ ಕನ್ನಡ

Mangaluru ನಾಗುರಿ ದುರಂತದಲ್ಲಿ ತೋರಿದ ಅಪ್ರತಿಮ ಧೈರ್ಯ, ಸಮಯಪ್ರಜ್ಞೆಗಾಗಿ ಅಗ್ನಿಶಾಮಕ ಅಧಿಕಾರಿಗೆ ಕೃತಜ್ಞತಾ ಪತ್ರ

 ಮಂಗಳೂರು, ಜುಲೈ 06 : ಮಂಗಳೂರು ನಗರದ ಕಂಕನಾಡಿಯ ನಾಗುರಿಯಲ್ಲಿ ಜುಲೈ 1 ರಂದು ನಡೆದಿದ್ದ ಮನೆ ಕುಸಿತ ದುರಂತ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಜಿಲ್ಲಾ ಅಗ್ನಿಶಾಮಕ  ಅಧಿಕಾರಿ ಮಹಮ್ಮದ್ ಝುಲ್ಫಿಕರ್ ನವಾಜ್ ಕೆ.ಪಿ. ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಭಾನುವಾರ ಶ್ಲಾಘನೀಯ ಮತ್ತು ಕೃತಜ್ಞತಾ ಪತ್ರ ಸಲ್ಲಿಸಲಾಯಿತು.

    ರಕ್ಷಣಾ ಕಾರ್ಯಾಚರಣೆ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಪ್ರದರ್ಶಿಸಿದ ಅಪ್ರತಿಮ ಧೈರ್ಯ, ಸಮಯಪ್ರಜ್ಞೆ ಮತ್ತು ನಿಸ್ವಾರ್ಥ ಸೇವೆ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅಭಿನಂದಿಸಿದರು.


   ವಿಧಾನ ಪರಿಷತ್ ಸದಸ್ಯರಾದ ಐವನ್   ಡಿಸೋಜ, ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯತ್ ಸಿ.ಇ.ಒ ನರ್ವಾಡೆ ವಿನಾಯಕ ಕಾರ್ಭಾರಿ ಉಪಸ್ಥಿತರಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!