BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಯುವ ಕಾಂಗ್ರೆಸ್ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ.ಪಿ ನೇಮಕ


ಮಂಗಳೂರು, ಜುಲೈ 22: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಇವರ ಅನುಮೋದನೆಯೊಂದಿಗೆ ಆಯಿಷಾ.ಪಿ, ಇವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ಮಂಜುನಾಥ್ ಹೆಚ್.ಎಸ್. ಆದೇಶವನ್ನು ಹೊರಡಿಸಿದ್ದಾರೆ. ಹೆಲ್ತ್ ಇನ್ಸ್ ಪೆಕ್ಟರ್ & ಲೇಖಕಿ ಆಗಿರುವ ಆಯಿಷಾ ಅವರು ಪತ್ರಕರ್ತ, ಟಿವಿ ನಿರೂಪಕ ಶಂಶೀರ್ ಬುಡೋಳಿ ಅವರ ಪತ್ನಿಯಾಗಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!