ಮಂಗಳೂರು, ಜುಲೈ 07: ಮಂಗಳೂರು ನಗರಲ್ಲಿ ಮಹಿಳೆಯೋರ್ವಳು ನಾಪತ್ತೆಯಾಗಿದ್ದಾಳೆ. ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಮಹಿಳೆಯಾಗಿದ್ದಾಳೆ.
ಜೂನ್ 30ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕಚೇರಿಗೆ ಕೆಲಸಕ್ಕೆಂದು ತೆರಳಿದ್ದ ಶರ್ಮಿಳಾ ಅವರು ಬಳಿಕ ಮನೆಗೆ ಮರಳಿಲ್ಲ ಎನ್ನಲಾಗಿದೆ.
ಸಂಬಂಧಿಕರು ಹಾಗೂ ಪರಿಚಿತರಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ಪತಿ ನಗರದ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶರ್ಮಿಳಾ ಅವರ ಪತ್ತೆಗೆ ಅಗತ್ಯ ಕ್ರಮ ಕೈಗೊಂಡು ತನಿಖೆ ಮುಂದುವರಿಸಿದ್ದಾರೆ.
