BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Minor Girl missing case ಸುಳ್ಯದಿಂದ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ, ಕಡಬದ ಯುವಕನ ಮೇಲೆ ಬಿತ್ತು ಪೋಕ್ಸೊ..!

ಸುಳ್ಯ, ಜುಲೈ 24: ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಡಬದ ಯುವಕನೊಬ್ಬನನ್ನು ಸುಳ್ಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಜೈಲಿಗಟ್ಟಿದ್ದಾರೆ.

 ದಕ್ಷಿಣ ಕನ್ನಡದ ಸುಳ್ಯದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಂಗಳೂರಿಗೆ ಕೆಲಸಕ್ಕೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಈಕೆ ಸುಮಾರು ಎರಡೂವರೆ ತಿಂಗಳ ಬಳಿಕ ಪತ್ತೆಯಾಗಿದ್ದಳು. ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಈಗ ಕಡಬದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿ ಪೋಕ್ಸೋ  ಪ್ರಕರಣ ದಾಖಲಿಸಿದ್ದಾರೆ. .

 ಸುಳ್ಯದ ಈ ಬಾಲಕಿ ಮೇ 7, 2026ರಂದು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿರುವುದಾಗಿ ಮನೆಯಿಂದ ತೆರಳಿದ್ದಳು. ಆದರೆ ಬಳಿಕ ಮನೆಗೆ ಹಿಂದಿರುಗದೆ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದರು ಆದ್ರೂ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರ ಅಡಿಯಲ್ಲಿ ಕಾಣೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಮುಂದುವರಿಸಿದ್ದ ಪೊಲೀಸರು ಜುಲೈ 22ರಂದು ಕಾಣೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಪೊಲೀಸ್ ವಿಚಾರಣೆ ವೇಳೆ ಕಡಬ ನಿವಾಸಿ ಧನುಷ್(18) ಎಂಬಾತ ತನಗೆ ಸುಳ್ಳು ಭರವಸೆ ನೀಡಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದು, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಇದೀಗ ಬಾಲಕಿಯ ಹೇಳಿಕೆ ಆಧರಿಸಿ, ಭಾರತೀಯ ನ್ಯಾಯ ಸಂಹಿತೆಯ ಕಲಂ 64(2)(m) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ (POCSO) ಕಾಯ್ದೆಯ ಕಲಂ 5(l) ಮತ್ತು 6 ಅಡಿ ಧನುಷ್ ಮೇಲೆ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದಾರೆ. ಅಪ್ರಾಪ್ತ ಮಕ್ಕಳ ವಿರುದ್ಧದ ಅಪರಾಧಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.  

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!