BREAKING
ದಕ್ಷಿಣ ಕನ್ನಡ

Moodabidre ಮೂಡುಬಿದಿರೆಯಲ್ಲಿ ಸಾರ್ವಜನಿಕವಾಗಿ ತಲವಾರು ಹಿಡಿದು ಯುವಕನ ರೌಡಿಸಂ, ಯುವಕ ಪೊಲೀಸ್ ವಶಕ್ಕೆ


ಮೂಡುಬಿದಿರೆ,ಜುಲೈ 18: ಮೂಡುಬಿದಿರೆಯ  ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನೋವ೯ ಕೈಯಲ್ಲಿ ಕತ್ತಿ ಹಿಡಿದು ಭಯದ ವಾತಾವರಣ ಸೃಷ್ಟಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಈತನನ್ನು ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ಯುವಕ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ಕೈಯಲ್ಲಿ ಕತ್ತಿ‌ ಹಿಡಿದುಕೊಂಡು ಮೊಬೈಲ್ ಅಂಗಡಿಗೆ ತೆರಳಿ ಅಲ್ಲಿದ್ದ ಯುವಕರಿಗೆ ಮೊಬೈಲ್ ಕೊಡುವಂತೆ ಬೆದರಿಸಿದ್ದಾನೆ ನಂತರ ಹೊರಗಡೆ ಬಂದು ತಲವಾರನ್ನು ಬೆನ್ನಿನ ಭಾಗದಲ್ಲಿ ಇರಿಸಿಕೊಂಡು ಕುಳಿತುಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕಾಗಮಿಸಿ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!