Puttur 27 ದಿನಗಳ ಜೀವನ್ಮರಣ ಹೋರಾಟ, ಇಹಲೋಕ ತ್ಯಜಿಸಿದ ಪ್ರಜ್ಞಾ..!
ಸುದ್ದಿವಾಣಿ
7/18/2026 11:01:00 AM
ಪುತ್ತೂರು, ಜುಲೈ18 :ಕಳೆದ ಸುಮಾರು ಒಂದು ತಿಂಗಳಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಟ್ಟಂಪಾಡಿಯ ಯುವತಿ ಪ್ರಜ್ಞಾ ಇಹಲೋಕ ತ್ಯಜಿಸಿದ್ದಾರೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕ ದಿ. ಹೆಗ್ಗಡೇಶ ಗೌಡ ಅವರ ಪುತ್ರಿಯಾಗಿರುವ ಪ್ರಜ್ಞಾ ಅವರು 27 ದಿನಗಳ ಹಿಂದೆ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಡಗನ್ನೂರು ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯಾಧಿಕಾರಿಯಾಗಿದ್ದ 26 ವರ್ಷದ ಪ್ರಜ್ಞಾ ಜೂನ್ 21 ರಂದು ಮನೆಯಲ್ಲೇ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೋಡಲೇ ಅವರನ್ನು ಮಂಗಳೂರು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಪ್ರಜ್ಞಾ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ತಂದೆ ನಿಧನದ ಬಳಿಕ ಕುಟುಂಬದ ಜವಾಬ್ದಾರಿ ವಹಿಸಿದ್ದ ಪ್ರಜ್ಞಾ ಅವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಟ್ಯಾಗ್ಗಳು:
ದಕ್ಷಿಣ ಕನ್ನಡ