BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Puttur BMW Car Fire ಚಲಿಸುತ್ತಿದ್ದ BMW ಐಷಾರಾಮಿ ಕಾರು ಬೆಂಕಿಗಾಹುತಿ, ಕಾರಲ್ಲಿದ್ದ ನಾಲ್ವರೂ ಅಪಾಯದಿಂದ ಪಾರು


ಪುತ್ತೂರು, ಜುಲೈ 18: ಚಲಿಸುತ್ತಿದ್ದ BMW ಐಷಾರಾಮಿ ಕಾರೊಂದು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡದ  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ನೋಡು ನೋಡುತಿದ್ದಂತೆ ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದೆ. ಈ ಸಂದರ್ಭ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಎಲ್ಲಾರೂ ಅದೃಷ್ಟವಶಾತ್ ಪ್ರಾಣಾಪಾದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಈ ಐಷಾರಾಮಿ BMW ಕಾರು ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದಾಗ, ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ಇದನ್ನು ತಕ್ಷಣವೇ ಗಮನಿಸಿದ ಚಾಲಕ ಕಾರನ್ನು ಹೆದ್ದಾರಿ ಬದಿಗೆ ನಿಲ್ಲಿಸಿದ್ದಾರೆ. ಕಾರಿಗೆ ಬೆಂಕಿ ವ್ಯಾಪಿಸುವ ಮುನ್ನವೇ ಒಳಗಿದ್ದ ನಾಲ್ವರೂ ಪ್ರಯಾಣಿಕರು ತಕ್ಷಣವೇ ಹೊರಗೆ ಓಡಿ ಬಂದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅವರು ಕೆಳಗಿಳಿಯುತ್ತಿದ್ದಂತೆ ಇಡೀ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಭಸ್ಮವಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!