BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Puttur Car Accident ನಿಂತಿದ್ದ ಲಾರಿಗೆ ಕಾರು ಡಿಕ್ಕಿ,ಮಗು ಸೇರಿ ಐವರು ಗಾಯ..!


ಪುತ್ತೂರು, ಜುಲೈ 29 : ನಿಂತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಢಿಕ್ಕಿಯಾಗಿ ಕಾರಿನಲ್ಲಿದ್ದ ಮಗು ಸೇರಿ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಡಿ ಸಮೀಪ ಪೆರ್ನೆ ಮೈರಕಟ್ಟೆ ಎಂಬಲ್ಲಿ  ನಡೆದಿದೆ. ಕಾರು ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಸಿಯಾ (25), ಜುಲೈಕಾ (52), ಮಹಮ್ಮದ್ ಅಫ್ಘಾನ್ (15) ಹಾಗೂ ಮಹಮ್ಮದ್ ಇಲ್ಮಾನ್ (4) ಗಾಯಗೊಂಡ ಪ್ರಯಾಣಿಕರಾಗಿದ್ದಾರೆ .ಬಂಟ್ವಾಳ ಫರಂಗಿಪೇಟೆ ಕಡೆಯಿಂದ ಉಪ್ಪಿನಂಗಡಿ ಕಡೆ ಸಂಚರಿಸುವಾಗ ಈ ಅಪಘಾತ ಸಂಭವಿಸಿದೆ. ಮೈರಕಟ್ಟೆ ಎಂಬಲ್ಲಿ ಹೆದ್ದಾರಿ ಬದಿ ಟಿಪ್ಪರೊಂದು ಕೆಟ್ಟು ನಿಂತಿದ್ದು, ಕಾರು ಹಿಂಬದಿಯಿಂದ ಬಂದು ಟಿಪ್ಪರ್‌ಗೆ  ಡಿಕ್ಕಿಯಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪುಕರಣ ದಾಖಲಾಗಿದೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!