BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ದಕ್ಷಿಣ ಕನ್ನಡ

Puttur ಗುಂಡ್ಯ ಹೆದ್ದಾರಿಯಲ್ಲಿ ಕಾರು ಅಪಘಾತ , ವೃದ್ದೆ ಮೃತ್ಯು, ಐವರಿಗೆ ಗಾಯ

ಪುತ್ತೂರು: ಗುಂಡ್ಯ ಹೆದ್ದಾರಿಯಲ್ಲಿ ಕಾರೊಂದು ಅಪಘಾತಕ್ಕೀಡಾಗಿದ್ದು ಕಾರಿನಲ್ಲಿ ಪ್ರಯಾಣಿಕರಲ್ಲಿ ಓರ್ವ ವೃದ್ದೆ ಸಾವನ್ನಪಿದ್ದಾರೆ. 


 ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಈ ಅಪಘಾತ ಬುಧವಾರ ಸಂಜೆ ಸಂಭವಿಸಿದೆ. ಉಡುಪಿ ಮೂಲದ ವಾಗ್ದೇವಿ (77)  ಮೃತ ಮಹಿಳೆಯಾಗಿದ್ದಾಳೆ.  ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂಜೀವಿನಿ, ಸತೀಶ್, ಗುರುರಾಜ್, ವರಲಕ್ಷ್ಮಿ, ಕಾರ್ತೇಶ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯಾವುದೋ ಅಪರಿಚಿತ ವಾಹನ ಇವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಹೆದ್ದಾರಿ ಬದಿಗೆ ಎಸೆಯಲ್ಪಟ್ಟು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರ ನೆರವಿನೊಂದಿಗೆ ಕಾರಿನಲ್ಲಿದ್ದ ಗಾಯಾಳುಗಳು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ರವಾನಿಸಲಾಗಿದೆ.  ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!