ಮೈಸೂರು, ಜುಲೈ 11: ಭಾರತದ ಗಾನ ಕೋಗಿಲೆ ಖ್ಯಾತ ಗಾಯಕಿ ಎಸ್.ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಎಸ್ ಜಾನಕಿ ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಗಾಯಕಿಯಾಗಿದ್ದರು.
ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಏಪ್ರಿಲ್ 23, 1937 ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು. ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ 17ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ. 48,000 ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತರಾಗಿದ್ದರು
1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಜಾನಕಿ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.
ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಹರಿಸಿದರು.
ಎಸ್. ಜಾನಕಿ ಅವರಿಗೆ ಹಲವು ರಾಷ್ಟ್ರಪ್ರಶಸ್ತಿಗಳು, ವಿವಿಧ ರಾಜ್ಯಗಳ ಪ್ರಶಸ್ತಿಯನ್ನು ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ. ಇನ್ನು ಇತ್ತೀಚಿನ ವರ್ಷದಲ್ಲಿ ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ ಅದನ್ನು ತಿರಸ್ಕರಿಸಿದರು.
ಎಸ್. ಜಾನಕಿ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.