ಶಿವಮೊಗ್ಗ, ಜುಲೈ 07 : SIR ಕರ್ತವ್ಯದ ವೇಳೆ ಹೃದಯಾಘಾತವಾಗಿ ಮಹಿಳಾ BLO ಅವರು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಬಿಎಲ್‌ಒ ಹೃದಯಾಘಾತದಿಂದ ಸಾವನ್ನಪ್ಪಿ್ದಾರೆ.
ಭದ್ರಾವತಿ ತಾಲೂಕಿನ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ 52 ವರ್ಷದ ಮಂಜುಳಾ ಮೃತ ಅಧಿಕಾರಿಯಾಗಿದ್ದಾರೆ.
ಅರಕೆರೆ ಪಂಚಾಯ್ತಿ ವ್ಯಾಪ್ತಿಯ ಕೋಡಿಹೊಸೂರಿನಲ್ಲಿ ಮನೆ ಮನೆಗೆ ತೆರಳಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದ ವೇಳೆಯಲ್ಲಿ ಹೃದಯಾಘಾತವಾಗಿ ಮಂಜುಳಾ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.