BREAKING
ದಕ್ಷಿಣ ಕನ್ನಡ

surthkal ಮಾನಸಿಕ ಖಿನ್ನತೆ , ಸುರತ್ಕಲಿನಲ್ಲಿ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಜೀವಾಂತ್ಯ


ಸುರತ್ಕಲ್,ಜುಲೈ15: ಅಪಾರ್ಟ್ ಮೆಂಟ್ ಒಂದರಿಂದ ಹಾರಿಕೊಂಡು ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು  ಜೀವಾಂತ್ಯ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಮಹಾಲಕ್ಷ್ಮೀ ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು. 

ಸುರತ್ಕಲ್‌ನ ಫ್ಲ್ಯಾಟ್ ಒಂದರಲ್ಲಿ ವಾಸ್ತವ್ಯವಿದ್ದ ಮಹಾಲಕ್ಷ್ಮೀ  ಫ್ಲ್ಯಾಟ್​ನ ಐದನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲದಿದ್ದರೂ ಆಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗುತ್ತಿದೆ. ಹುಬ್ಬಳ್ಳಿಯಿಂದ ಬಂದಿದ್ದ ಆಕೆಯ ಹೆತ್ತವರೂ ಮನೆಯಲ್ಲಿದ್ದು, ಅವರು ಇದ್ದಾಗಲೇ ಈ ದುರ್ಘಟನೆ ನಡೆದಿದೆ

ಇದಕ್ಕಿಂತ ಮೊದಲು ಕೂಡ ಮಹಾಲಕ್ಮೀ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬ ಮಾಹಿತಿ ಸಿಕ್ಕಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. 



📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!