ತುಮಕೂರು, ಜುಲೈ 04: SIR ಕರ್ತವ್ಯಕ್ಕೆ ತೆರಳುತಿದ್ದ ಗ್ರಾಮ ಆಡಳಿತಧಿಕಾರಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾಳೆ. 24 ವರ್ಷದ ಭುವನಾ ಅವರು ಮೃತ ಪಟ್ಟ ದುರ್ದೈವಿಯಾಗಿದ್ದಾರೆ.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ದ್ವಿಚಕ್ರ ವಾಹನಭುವನಾ ಅವರು ತೆರಳುತ್ತಿದ್ದರು. ಶನಿವಾರ ಬೆಳಗ್ಗೆ ತುಮಕೂರಿನ ಗೂಳೂರು ಬಳಿ ದ್ವಿಚಕ್ರದಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ.
ಈ ದುರಂತದ ಬೆನ್ನಲ್ಲೇ ಕಂದಾಯ ಇಲಾಖೆ ಸಿಬ್ಬಂದಿ ಮೇಲಾಧಿಕಾರಿಗಳ 'ಕೆಲಸದ ಒತ್ತಡ'ವೇ ಸಾವಿಗೆ ಕಾರಣ ಎಂದು ಆರೋಪಿಸಿ ಪ್ರತಿಭಟನೆಗಿಳಿದಿದ್ದಾರೆ. ಭುವನಾ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತುಮಕೂರಿನ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಲಾಧಿಕಾರಿಗಳ ವಿಪರೀತ ಕೆಲಸದ ಒತ್ತಡ ಹಾಗೂ ಈ ಪರಿಸ್ಥಿತಿಗೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ.