BREAKING
ರಾಜ್ಯ
ದೇಶ
ವಿದೇಶ
ಕ್ರೀಡೆ
ಸಿನಿಮಾ
ಉಡುಪಿ
ಉಡುಪಿ

Udupi ಕರಾವಳಿ ಭಾಗದಲ್ಲಿ ಮುಂದಿನ 2 ದಿನ ಭಾರಿ ಮಳೆ, ರೆಡ್ ಅಲರ್ಟ್ ಘೋಷಣೆ

 ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 2 ಗುರುವಾರ ಮತ್ತು 3 ಶುಕ್ರವಾರದಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.




ಈ ಹಿನ್ನೆಲೆಯಲ್ಲಿಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. 

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. 



📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!