BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi Muder ಕುಂದಾಪುರ: ಬೆಳ್ಳಂಬೆಳಗ್ಗೆ ಹರಿಯಿತ್ತು ನೆತ್ತರು,ಗುಂಡಿಕ್ಕಿ ಉದ್ಯಮಿ ಹತ್ಯೆ…!!


ಉಡುಪಿ, ಜುಲೈ31 : ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಇಲ್ಲಿನ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಮೃತರನ್ನು ಐವನ್ ರಿಚಾರ್ಡ್ ಮಸ್ಕರೇನಸ್ @ ಮುನ್ನಾ ಎಂದು ಗುರುತಿಸಲಾಗಿದೆ. ಈತ ಪಿಟ್ಟಿ ನಾಗೇಶ್ ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಒಂದಷ್ಟು ವ್ಯವಹಾರಗಳನ್ನು ಮಾಡಿಕೊಂಡಿದ್ದ. ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ. ಪಿಸ್ತೂಲ್ ಮೂಲಕ ಆರೋಪಿ ಐವನ್ ಅವರಿಗೆ ಗುಂಡು ಹೊಡೆದು ಪರಾರಿಯಾಗಿದ್ದು, ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಮಹಿಳೆ ಆರೋಪಿಯ ಗುರುತು ಹಚ್ಚಿದ್ದು, ಪರಾರಿಯಾದ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರೆ ವ್ಯವಹಾರಕ್ಕೆ ಸಂಬಂಧಪಟ್ಟ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ. ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ. 



ಹಣಕಾಸಿನ ವ್ಯವಹಾರದ ವೈಷಮ್ಯಕ್ಕೆ ಹತ್ಯೆ..! ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ತಂಡ ರಚನೆ :

 ಹಣಕಾಸಿನ ವ್ಯವಹಾರದ ವೈಷಮ್ಯದಿಂದ ಈ ಹತ್ಯೆಯಾಗಿದೆ ಎನ್ನಲಾಗಿದೆ. ಜುಲೈ 30ರ ರಾತ್ರಿ ಆರಂಭವಾದ ಮಾತಿನ ಚಕಮಕಿ, ಜುಲೈ 31ರ ಮುಂಜಾನೆ ಭೀಕರ ತಿರುವು ಪಡೆದುಕೊಂಡಿದೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಡೆರಿಕ್ ಮತ್ತು ಐವನ್ ನಡುವೆ ಗಲಾಟೆ ನಡೆದಿದ್ದು, ಬಳಿಕ ಡೆರಿಕ್ ಲೊಕೇಶನ್ ಕಳುಹಿಸಿ ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರಿಗೆ ಬರಲು ಸೂಚಿಸಿದ್ದಾನೆ ಎನ್ನಲಾಗಿದೆ. ಮುಂಜಾನೆ ಸುಮಾರು 3:15ರ ವೇಳೆಗೆ ಸ್ಥಳಕ್ಕೆ ಥಾರ್ ಕಾರಿನಲ್ಲಿ ಬಂದ ಆರೋಪಿ ಡೆರಿಕ್, ಕಾರಿನಿಂದ ಇಳಿದ ಐವನ್ ಮೇಲೆ ಗನ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಮಾಹಿತಿ ತಿಳಿಸಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 67/2026ರಡಿ ಬಿಎನ್‌ಎಸ್ ಕಲಂ 103 ಹಾಗೂ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ 3 ಮತ್ತು 25ನೇ ಕಲಂಗಳಡಿ ಪ್ರಕರಣ ದಾಖಲಾಗಿದೆ. ಐವನ್ ಯಾನೆ ಮುನ್ನಾ ಈ ಹಿಂದೆ ಕುಕ್ಕಿಕಟ್ಟೆಯ ಪಿಟ್ಟಿ ನಾಗೇಶ ಕೊಲೆ ಕೇಸ್ ನಲ್ಲಿ ಆರೋಪಿಯಾಗಿದ್ದ.ಈತನ ಮೇಲೆ ಉಡುಪಿ ನಗರ ಠಾಣೆಯಲ್ಲಿ ರೌಡಿ ಶೀಟ್ ಇತ್ತು. ಮುನ್ನಾ ಮೊದಲು ಪಿಟ್ಟಿ ನಾಗೇಶ್ ನ ಡೈವರ್ ಆಗಿದ್ದ.ಯಾವುದೋ ದ್ವೇಷದಿಂದ ಪಿಟ್ಟಿ ನಾಗೇಶ್ ಕೊಲೆಯಲ್ಲಿ ಭಾಗಿಯಾಗಿದ್ದ. ಪಿಟ್ಟಿ ನಾಗೇಶ್ ನ ತಂಡ ಈತನ ಹತ್ಯೆಗಾಗಿ ಕೆಲವು ಬಾರಿ ಸಂಚು ರೂಪಿಸಿತ್ತು.ಆದರೆ ಇಂದು ಕುಂದಾಪುರದಲ್ಲಿ ಕೊಲೆಯಾಗಿದ್ದಾನೆ.
ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!