BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಹೆದ್ದಾರಿ ಮಧ್ಯೆ ಮ್ಯೂಸಿಕ್ ಇಟ್ಟು ತಲವಾರು ಜಳಪಿಸಿ ಹುಚ್ಚಾಟ, ಯುವಕ ಪೊಲೀಸ್ ವಶಕ್ಕೆ


ಉಡುಪಿ,ಜುಲೈ15: ಯುವಕನೊಬ್ಬ ಹೆದ್ದಾರಿ ಮಧ್ಯೆ ನಿಂತು  ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದ ಘಟನೆ ಉಡುಪಿ ಕೋಟ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಹೆದ್ದಾರಿಯ ಮಧ್ಯೆ ಟೇಬಲ್ ಇಟ್ಟು, ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಆತಂಕ ಉಂಟಾಗಿತ್ತು.

ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್  ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.  ಉದ್ದನೆಯ ತಲೆಕೂದಲು ಹಾಗೂ ಗಡ್ಡದೊಂದಿಗೆ ಹೆದ್ದಾರಿಯಲ್ಲೇ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನನ್ನು ಕಂಡು ವಾಹನ ಸವಾರರು ಮತ್ತು ಸ್ಥಳೀಯರು ಆತಂಕಗೊಂಡರು .ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿ ಬಂದ ಕೋಟ ಪೊಲೀಸರು ಯುವಕನನನ್ನು ವಶಕ್ಕೆ ಪಡೆಯಲು ಯ್ನಿಸಿದಾಗ  ಪೊಲೀಸರ ಮೇಲೆಯೇ  ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.

ಪ್ರಾಥಮಿಕ ವಿಚಾರಣೆಯಲ್ಲಿ ಆತ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ, ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!