ಅಲಿಗಢ,ಜುಲೈ13 : 14 ವರ್ಷದ ಬಾಲಕಿಯನ್ನು ಅಪಹರಿಸಿ, ಮಾದಕ ದೃವ್ಯ ನೀಡಿ ಪ್ರಜ್ಞೆ ತಪ್ಪುವಂತೆ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಚರ್ರಾ ಗ್ರಾಮದಲ್ಲಿ ನಡೆದಿದೆ.
ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಬಲೆ ಬೀಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ತರಕಾರಿ ಖರೀದಿಸಲು ಬಾಲಕಿ ಮನೆಯಿಂದ ಹೋಗಿದ್ದಳು ಆದ್ರೆ ಹೊತ್ತಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ಆರಂಭಿಸಿ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
A 14-year-old girl was allegedly kidnapped and gang-raped by two Hindu men in Uttar Pradesh's Aligarh district on Saturday.
ತೀವ್ರ ಹುಡುಕಾಡದ ಬಳಿಕ ಗ್ರಾಮದ ಹೊರವಲಯದ ಹೊಲವೊಂದರಲ್ಲಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ದೇಹದಲ್ಲಿ ಗಾಯಗಳಿದ್ದು, ಬಟ್ಟೆಗಳು ಹರಿದ ಸ್ಥಿತಿಯಲ್ಲಿದ್ದವು. ದುಷ್ಕೃತ್ಯದ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲು ಮಾಡಿ ಕಾರ್ಯಚರಣೆ ಆರಂಭಿಸಿದ್ದರು. ಈ ಸಂಬಂಧ ಕಿಶನ್ ಗೋಪಾಲ್ ವಾಲ್ಮೀಕಿ ಮತ್ತು ಸಂಜು ವಾಲ್ಮೀಕಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ. .
ಸಂತ್ರಸ್ತೆಯ ಕುಟುಂಬದ ದೂರಿನ ಪ್ರಕಾರ, ಆರೋಪಿಗಳು ಮೊದಲು ಬಾಲಕಿಗೆ ಪ್ರಜ್ಞೆ ತಪ್ಪಿಸುವ ವಸ್ತುವನ್ನು ನೀಡಿ, ಬಳಿಕ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೊ (POCSO) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
