BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Woman Harassment ‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ 'ರಾಘವ' ಅರೆಸ್ಟ್‌..!


ಬೆಂಗಳೂರು, ಜುಲೈ28 :ಕ್ಯಾಬ್‌ಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ಮಾತನಾಡಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ರಾಮಮೂರ್ತಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಹಣ್ಣು ಮಾರಾಟಗಾರ ವಿಜಯ್ ರಾಘವ್ (42) ಎಂದು ಗುರುತಿಸಲಾಗಿದೆ.

 ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ವಾಹನ ನಿಲ್ಲಿಸಿ ಮಾತು ಆರಂಭಿಸಿದ್ದ. ಬಳಿಕ ಆತ ಅಸಭ್ಯವಾಗಿ ವರ್ತಿಸಿ, “ನಿನ್ ರೇಟ್ ಎಷ್ಟು?” ಎಂದು ಪ್ರಶ್ನಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.ಈ ಅಸಭ್ಯ ವರ್ತನೆಯಿಂದ ಬೆಚ್ಚಿಬಿದ್ದ ಯುವತಿ ಧೈರ್ಯ ಕಳೆದುಕೊಳ್ಳದೇ ತನ್ನ ಮೊಬೈಲ್‌ನಲ್ಲಿ ಆತನ ವರ್ತನೆಯನ್ನು ವಿಡಿಯೋ ಚಿತ್ರೀಕರಿಸಲು ಆರಂಭಿಸಿದ್ದಾರೆ. ತನ್ನ ವಿರುದ್ಧ ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರೂ ಆರೋಪಿಯು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ.ಆದರೆ ತನ್ನ ಮುಖ ಹಾಗೂ ಸ್ಕೂಟರ್‌ನ ನೋಂದಣಿ ಸಂಖ್ಯೆ ಮೊಬೈಲ್‌ನಲ್ಲಿ ಸ್ಪಷ್ಟವಾಗಿ ಸೆರೆಹಿಡಿಯಲಾಗುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆಯೇ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಯುವತಿ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು, ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆ ಎತ್ತಿದ್ದರು. ಜೊತೆಗೆ ಬೆಂಗಳೂರು ನಗರ ಪೊಲೀಸರನ್ನು ಟ್ಯಾಗ್ ಮಾಡಿ ಆರೋಪಿಯನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.  ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಮಮೂರ್ತಿನಗರ ಪೊಲೀಸರು ಸ್ವಯಂಪ್ರೇರಿತವಾಗಿ ತನಿಖೆ ಆರಂಭಿಸಿ, ವಿಡಿಯೋದಲ್ಲಿದ್ದ ದೃಶ್ಯಗಳು ಹಾಗೂ ಸ್ಕೂಟರ್‌ನ ನೋಂದಣಿ ಸಂಖ್ಯೆಯನ್ನು ಆಧರಿಸಿ ಆರೋಪಿಯ ಪತ್ತೆ ಮಾಡಿ ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಕ್ಯಾಬ್‌ಗಾಗಿ ಕಾದಿದ್ದ ಯುವತಿಗೆ 'ನಿನ್ನ ರೇಟ್ ಎಷ್ಟು' ಕೇಳಿದ್ದ ರಾಘವನ ಚಳಿ ಬಿಡಿಸಿದ ಖಾಕಿ..!


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!