BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Arrest warrant against congress mla pradeep eshwar ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಜಾಮೀನು ರಹಿತ ವಾರಂಟ್ ಜಾರಿ..!


ಬೆಂಗಳೂರು, ಆಗಸ್ಟ್ 25: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಸಂಕಷ್ಟ ಎದುರಾಗಿದ್ದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್, ಪ್ರದೀಪ್ ಈಶ್ವರ್ ಗೆ ಜಾಮೀನು ರಹಿತ ಬಂಧನ ವಾರಂಟ್  ಹೊರಡಿಸಿದೆ. 

ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ ಪ್ರದೀಪ್ ಈಶ್ವರ್ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ. ಪ್ರದೀಪ್ ಈಶ್ವರ್, 11-1-2024ರಂದು ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದರು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಈಸ್ವರ್ ಗೆ ಸೂಚಿಸಿತ್ತು.ಆದರೆ ಕೋರ್ಟ್ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾಗಿದ್ದರು. ಕೋರ್ಟ್ ಸೂಚಿಸಿದರೂ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಇಂದು ಪ್ರದೀಪ್ ಈಸ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಸಕ ಪ್ರದೀಪ್ ಈಶ್ವರ್ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!