BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Bantwal car Accident ಬಂಟ್ವಾಳ ಸೂರಿಕುಮೇರು ಬಳಿ ಕಾರು ಪಲ್ಟಿ, ಆರು ಮಂದಿಗೆ ಗಾಯ..!


ಬಂಟ್ವಾಳ, ಆಗಸ್ಟ್ 07 : ದಕ್ಷಿಣ ಕನ್ನಡದ  ಬಂಟ್ವಾಳ ಸೂರಿಕುಮೇರು ಬಳಿ  ಕಾರು ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಗಾಯಗೊಂಡಿದ್ದಾರೆ. ಸೂರಿಕುಮೇರು ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ಗುರುವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಈ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಸೂರಿಕುಮೇರುವಿನ  ಹೆಚ್‌ಪಿ ಪೆಟ್ರೊಲ್ ಬಂಕ್  ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಆರು  ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ ಮತ್ತು ಕಳಪೆ ರಸ್ತೆ ಪರಿಸ್ಥಿತಿಯಿಂದಾಗಿ ಅಪಘಾತ ಸಂಭವಿಸಿದ್ದು ಕಳೆದ ಒಂದು ತಿಂಗಳಿನಿಂದ ಇಲ್ಲಿ ಆನೇಕ ಅಪಘಾತಗಳು ಸಂಭವಿಸಿದ್ದು ರಸ್ತೆಯ ಅವೈಜ್ಞಾನಿಕ ಕಾಮಗಾರಿಯೇ ಅನಾಹುತಗಳಿಗೆ ಕಾರಣವಾಗಿದ್ದು ಅಸಮರ್ಪಕ ರಸ್ತೆ ವಿನ್ಯಾಸದಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಅಪಘಾತಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!