BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Bantwala Accident death ಬಂಟ್ವಾಳ ಸಜೀಪದಲ್ಲಿ ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು..!


ಬಂಟ್ವಾಳ, ಆಗಸ್ಟ್ 31:  ಆಟೋ ರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರಗೊಂಡು ಮೃತಪಟ್ಟ ದಾರುಣ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ.

ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಮೃತ ದುರ್ದೈವಿ.

ಘಟನೆಯ ವಿವರ:

ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ಮುಹಮ್ಮದ್ ರಶೀಕ್ ಅವರು ರವಿವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಸಜಿಪಕ್ಕೆ ತೆರಳುತ್ತಿದ್ದರು. ಆ ವೇಳೆ ಪೆಲತ್ತಕಟ್ಟೆ ಬಳಿ ಶಿವಾಜಿ ಕುಮಾರ್ ಎಂಬವರು ಚಲಾಯಿಸಿಕೊಂಡು ಬಂದ ಆಟೋ ರಿಕ್ಷಾ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡಿದ್ದ ರಶೀಕ್ ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಾವರ ನಿವಾಸಿ ಝೈನುಲ್ ಆಬಿದೀನ್ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಮೃತ ರಶೀಕ್ ತಂದೆ, ತಾಯಿ, ಸಹೋದರ-ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!