BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Belthangady ಬೆಳ್ತಂಗಡಿ:ಸತತ ಆರನೇ ಬಾರಿಗೆ'ವರ್ಷದ ಅತ್ಯುತ್ತಮ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾದ 'ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ'

 


ಬೆಳ್ತಂಗಡಿ,ಆಗಸ್ಟ್ 24 :ಸತತ ಆರನೇ ಬಾರಿಗೆ ‘ವರ್ಷದ ಅತ್ಯುತ್ತಮ ಸಹಕಾರಿ ಸಂಘ’ ಪ್ರಶಸ್ತಿಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಭಾಜನವಾಗಿದೆ. 

 ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ ಪ್ರತಿಷ್ಠಿತ “ವರ್ಷದ ಅತ್ಯುತ್ತಮ ಸಹಕಾರಿ ಸಂಘ” ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಇದರೊಂದಿಗೆ ಸಂಘವು ಸತತ ಆರನೇ ಬಾರಿಗೆ ಈ ಪ್ರಶಸ್ತಿಗೆ ಭಾಜನವಾಗಿದೆ.

ಆಗಸ್ಟ್ 22ರಂದು ನಡೆದ ಡಿಸಿಸಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಬ್ಯಾಂಕಿನ ನಿರ್ದೇಶಕರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್. ಪಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ. ಬಿ ಅವರು ಗಣ್ಯರಿಂದ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಅಶೋಕ್. ಪಿ ಹಾಗೂ ನಿರ್ದೇಶಕರಾದ ಡೀಕಯ್ಯಗೌಡ, ರುಕ್ಮಯ್ಯಗೌಡ, ಪ್ರಸಾದ್. ಎ, ಉದಯ. ಬಿ. ಕೆ, ಮತ್ತು ಚಂದನ್ ಕುಮಾರ್ ಉಪಸ್ಥಿತರಿದ್ದರು. ಸಂಘದ ಸತತ ಆರ್ಥಿಕ ಪ್ರಗತಿ ಹಾಗೂ ಸದಸ್ಯರಿಗೆ ನೀಡುತ್ತಿರುವ ಉತ್ತಮ ಸೇವೆಯನ್ನು ಗುರುತಿಸಿ ದೊರೆತಿರುವ ಈ ಗೌರವವು ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರಲ್ಲಿ ಅಪಾರ ಸಂತಸ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುವ ವಿಶ್ವಾಸವನ್ನು ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!