ಬೆಳ್ತಂಗಡಿ,ಆಗಸ್ಟ್ 31: ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯೊಬ್ಬನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಕೇರಳದಲ್ಲಿ ಯಶಸ್ವಿಯಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 172/2014, ಕಲಂ: 354(B), 323, 324, 504, 506 ಐಪಿಸಿ (IPC) ಪ್ರಕರಣದಡಿ ಆರೋಪಿತನಾಗಿ ತಲೆಮರೆಸಿಕೊಂಡಿದ್ದ ಕೇರಳದ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ @ ಆಂಟೋನಿ ಬಂಧಿತ ಆರೋಪಿ.
ದಿನಾಂಕ 29/08/2026 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ ಹಾಗೂ ಪಿಸಿ ಮನು ನಾಯ್ಕ ಅವರುಗಳು ಖಚಿತ ಮಾಹಿತಿ ಮೇರೆಗೆ ಕೇರಳ ರಾಜ್ಯದ ಕಣ್ಣೂರು ಪ್ರದೇಶಕ್ಕೆ ತೆರಳಿ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಂತರ ಆರೋಪಿಯನ್ನು ಬೆಳ್ತಂಗಡಿಗೆ ಕರೆತಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.