BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Bengaluru Passenger Caught Hiding Gold Inside Mouth ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಚಿತ್ರ ಕಳ್ಳಸಾಗಣೆ ಯತ್ನ: ಬಾಯಿಯೊಳಗೆ ಚಿನ್ನ ಬಚ್ಚಿಟ್ಟು ಸಿಕ್ಕಿಬಿದ್ದ ದುಬೈ ಯಾತ್ರಿಕ


ಬೆಂಗಳೂರು, ಆಗಸ್ಟ್ 27 : ಕಸ್ಟಮ್ಸ್ ಹಾಗೂ ಭದ್ರತಾ ಸಿಬ್ಬಂದಿಯ ಕಣ್ಣುತಪ್ಪಿಸಿ ಬಾಯಿಯೊಳಗೆ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಯತ್ನಿಸಿದ ಪ್ರಯಾಣಿಕನೊಬ್ಬ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಸಿಕ್ಕಿಬಿದ್ದಿದ್ದಾನೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಭಾರತೀಯ ಪ್ರಯಾಣಿಕನೊಬ್ಬ, ಇಲ್ಲಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧತೆ ನಡೆಸಿದ್ದ ವೇಳೆ ಈ ಕೃತ್ಯ ಎಸೆಗಿದ್ದಾನೆ. ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದೆ.

ಭದ್ರತಾ ತಪಾಸಣೆ ವೇಳೆ ಬಯಲಾದ ಕೃತ್ಯ:

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಬೆಳಿಗ್ಗೆ 7.30ರ ಸುಮಾರಿಗೆ ಪ್ರಯಾಣಿಕರ ಸಾಮಾನ್ಯ ಭದ್ರತಾ ತಪಾಸಣೆ ನಡೆಯುತ್ತಿತ್ತು. ಈ ವೇಳೆ ಸದರಿ ಪ್ರಯಾಣಿಕನ ವರ್ತನೆ ಅನುಮಾನಾಸ್ಪದವಾಗಿರುವುದನ್ನು ಗಮನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ, ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಭದ್ರತಾ ಸಿಬ್ಬಂದಿಯ ಪ್ರಶ್ನೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ.

ಸಂದೇಹಗೊಂಡು ಆಳವಾದ ತಪಾಸಣೆ ನಡೆಸಿದಾಗ, ಆತ ತನ್ನ ಬಾಯಿಯೊಳಗೆ ಸುಮಾರು 82 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದ ಪ್ರಯಾಣಿಕನನ್ನು ಹೆಚ್ಚಿನ ವಿಚಾರಣೆ ಹಾಗೂ ಕಾನೂನು ಕ್ರಮಕ್ಕಾಗಿ ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದೆ. ವಶಪಡಿಸಿಕೊಳ್ಳಲಾಗಿರುವ ಚಿನ್ನವನ್ನು ಅದರ ಶುದ್ಧತೆ ಪರಿಶೀಲನೆಗಾಗಿ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುಬೈನಿಂದ ಆಗಮಿಸಿದ ಪ್ರಯಾಣಿಕನೊಬ್ಬ ಈ ರೀತಿ ವಿಚಿತ್ರವಾಗಿ ಚಿನ್ನ ಸಾಗಿಸಲು ಯತ್ನಿಸಿರುವುದು ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!