BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Bengaluru ಕರ್ನಾಟಕದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಸಂಪೂರ್ಣ ನಿಷೇಧ; ಇಂದಿನಿಂದಲೇ ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿ..!


ಬೆಂಗಳೂರು, ಆಗಸ್ಟ್ 12 : ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮಗಳ ಅಡಿಯಲ್ಲಿ ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು, ಆಗಸ್ಟ್ 10ರಂದೇ ಈ ಕುರಿತು ಅಧಿಕೃತ ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದೆ. ಈ ನಿಷೇಧವು ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಯಲ್ಲಿರಲಿದೆ.

ಈ ಆದೇಶದ ಬೆನ್ನಲ್ಲೇ ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ವಿಶೇಷ ತನಿಖೆ ಹಾಗೂ ದಾಳಿ ಕಾರ್ಯಾಚರಣೆಗಳು ಆರಂಭವಾಗಿವೆ. ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ಎಚ್ಚರಿಸಿದೆ. ಯಾವುದೇ ಪ್ರದೇಶದಲ್ಲಿ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕೆಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!