BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Bengaluru ಬೆಂಗಳೂರಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆಗೆ ಯತ್ನ: ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಅರೆಸ್ಟ್..!


ಬೆಂಗಳೂರು, ಆಗಸ್ಟ್ 17 : ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಅವರನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರು ತಡೆದಿದ್ದಕ್ಕೆ ಸಿಬ್ಬಂದಿ ಮೇಲೆ ಮಂಜು ದರ್ಪ ತೋರಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಬೆಂಗಳೂರಿನ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗೊಟ್ಟಿಗೆರೆ ಪ್ರದೇಶದಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿದ್ದ ವೇಳೆ, ಕರ್ತವ್ಯದಲ್ಲಿದ್ದ ಟ್ರಾಫಿಕ್ ಸಿಬ್ಬಂದಿ ಅರುಣ್ ಅವರು ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜು ಅವರ ಕಾರನ್ನು ತಡೆದಿದ್ದರು.

ತಮ್ಮ ಕಾರನ್ನು ತಡೆದಿದ್ದಕ್ಕೆ ಸಿಟ್ಟಿಗೆದ್ದ ಗೊಟ್ಟಿಗೆರೆ ಮಂಜು, ಏಕಾಏಕಿ ಕಾರಿನಿಂದ ಕೆಳಕ್ಕಿಳಿದು ಪೊಲೀಸ್ ಸಿಬ್ಬಂದಿಯೊಂದಿಗೆ ಜಗಳಕ್ಕಿಳಿದಿದ್ದಾರೆ. ಸಾರ್ವಜನಿಕರ ಮುಂದೆಯೇ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈದು, "ನೀನು ಇಲ್ಲಿ ಅದಹೇಗೆ ಕೆಲಸ ಮಾಡ್ತೀಯಾ, ನಾನು ನೋಡ್ತೀನಿ" ಎಂದು ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಿಬ್ಬಂದಿಯನ್ನು ತಳ್ಳಿ, ಕಾಲಿನಿಂದ ಒದೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಟ್ರಾಫಿಕ್ ಸಿಬ್ಬಂದಿ ಅರುಣ್ ಅವರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಆರೋಪಿ ಗೊಟ್ಟಿಗೆರೆ ಮಂಜು ಅವರನ್ನು ಪೊಲೀಸರು ಖಾಸಗಿ ಹೋಟೆಲ್‌ನಲ್ಲಿ ವಶಕ್ಕೆ ಪಡೆದು ಬಂಧನಕ್ಕೊಳಪಡಿಸಿದ್ದಾರೆ.

https://www.facebook.com/share/v/1Jt2g6tB7X/

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!