BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Communicable Diseases Control: State-Level Precautions ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ರಾಜ್ಯಾದ್ಯಂತ ಮುನ್ನೆಚ್ಚರಿಕೆ: ಆರೋಗ್ಯ ಸಚಿವರಿಂದ ಉನ್ನತ ಮಟ್ಟದ ಸಮಾಲೋಚನೆ



U T Khader

 

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ರಾಜ್ಯಾದ್ಯಂತ ಮುನ್ನೆಚ್ಚರಿಕೆ, ಆರೋಗ್ಯ ಸಚಿವರಿಂದ ಉನ್ನತ ಮಟ್ಟದ ಸಮಾಲೋಚನೆ..!

ಬೆಂಗಳೂರು,ಆಗಸ್ಟ್ 24: ರಾಜ್ಯದಲ್ಲಿ ಋತುಮಾನದ ಜ್ವರ (ಇನ್‌ಫ್ಲುಯೆಂಜಾ) ಹಾಗೂ H1N1 ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರೋಗಗಳ ನಿಯಂತ್ರಣ ಮತ್ತು ಚಿಕಿತ್ಸಾ ಸಿದ್ಧತೆಗಳ ಕುರಿತು ಪರಿಶೀಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ರಾಜ್ಯದ ಎಲ್ಲಾ ಜಿಲ್ಲೆಗಳ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ವಿಡಿಯೋ ಸಂವಾದ ನಡೆಸಿದ್ದಾರೆ.

ರಾಜ್ಯದಲ್ಲಿ ಋತುಮಾನದ ಜ್ವರದ (ಇನ್‌ಫ್ಲುಯೆಂಜಾ) ಹರಡುವಿಕೆಯನ್ನು ತಡೆಗಟ್ಟಲು ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಯು ಸಂಪೂರ್ಣ ಸನ್ನದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

U T Khader

ಪ್ರಸ್ತುತ ಪರಿಸ್ಥಿತಿ ಮತ್ತು ಕಣ್ಗಾವಲು ವ್ಯವಸ್ಥೆ:

ಪ್ರಕರಣಗಳ ವಿವರ: ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಷನ್ ಪ್ಲಾಟ್‌ಫಾರ್ಮ್ (IHIP) ವರದಿ ಪ್ರಕಾರ, 2026ರ ಆಗಸ್ಟ್ 22ರವರೆಗೆ ರಾಜ್ಯದ 32 ಜಿಲ್ಲೆಗಳಲ್ಲಿ ಒಟ್ಟು 4,212 ಪ್ರಯೋಗಾಲಯ ದೃಢೀಕೃತ ಇನ್‌ಫ್ಲುಯೆಂಜಾ ಪಾಸಿಟಿವ್ ಪ್ರಕರಣಗಳು ವರದಿAದಾಗಿವೆ. (2025ರಲ್ಲಿ 4,583 ಹಾಗೂ 2024ರಲ್ಲಿ 3,903 ಪ್ರಕರಣಗಳು ದಾಖಲಾಗಿದ್ದವು).

ರೋಗ ಪತ್ತೆ ಮತ್ತು ತನಿಖೆ: ILI (ಇನ್‌ಫ್ಲುಯೆಂಜಾ ಮಾದರಿಯ ಕಾಯಿಲೆ) ಮತ್ತು SARI (ತೀವ್ರ ಉಸಿರಾಟದ ಸೋಂಕು) ಪ್ರಕರಣಗಳ ನಿಖರತೆಗಾಗಿ ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿಗದಿತ ಕಣ್ಗಾವಲು ಕೇಂದ್ರಗಳಾಗಿ ಗುರುತಿಸಲಾಗಿದೆ. ICMR-NCDC ಮತ್ತು NIMHANS ಸೇರಿದಂತೆ ವೈರಲ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳ (VRDL) ಮೂಲಕ ಮಾದರಿ ಪರೀಕ್ಷೆಯನ್ನು ಚುರುಕುಗೊಳಿಸಲಾಗಿದೆ.

ಆರೋಗ್ಯ ಸಂಸ್ಥೆಗಳ ಸನ್ನದ್ಧತೆ:

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯವಿರುವ ಪಿಪಿಇ (PPE) ಕಿಟ್‌ಗಳು, ಎನ್-95 (N95) ಮಾಸ್ಕ್‌ಗಳು ಮತ್ತು ಒಸೆಲ್ಟಾಮಿವಿರ್ (Oseltamivir) ಔಷಧಿಯನ್ನು ಸಮರ್ಪಕ ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಳ್ಳಲು ಸೂಚಿಸಲಾಗಿದೆ. ಪ್ರಾಥಮಿಕ ಹಂತದಲ್ಲೇ ರೋಗಲಕ್ಷಣಗಳನ್ನು ಗುರುತಿಸಿ ಚಿಕಿತ್ಸೆ ನೀಡುವ ಬಗ್ಗೆ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗಿದೆ.


ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಮುನ್ನೆಚ್ಚರಿಕೆ ಸಲಹೆಗಳು:

ಮಾಡಬೇಕಾದುದ್ದು (DO'S):

ಸೀನುವಾಗ ಮತ್ತು ಕೆಮ್ಮುವಾಗ ಮೂಗು ಹಾಗೂ ಬಾಯಿಯನ್ನು ಕರವಸ್ತ್ರದಿಂದ ಕಡ್ಡಾಯವಾಗಿ ಮುಚ್ಚಿಕೊಳ್ಳಬೇಕು.

ಸೋಪು ಮತ್ತು ನೀರಿನಿಂದ ಕೈಗಳನ್ನು ಆಗಾಗ ಸ್ವಚ್ಛವಾಗಿ ತೊಳೆಯಬೇಕು.

ಸಾಕಷ್ಟು ಪ್ರಮಾಣದಲ್ಲಿ ನೀರು ಹಾಗೂ ದ್ರವ ಪದಾರ್ಥಗಳನ್ನು ಸೇವಿಸಬೇಕು.

ರೋಗಲಕ್ಷಣಗಳಿರುವ ವ್ಯಕ್ತಿಗಳು ಇತರರಿಂದ ಪ್ರತ್ಯೇಕವಾಗಿರಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು.

ಮಾಡಬಾರದ್ದು (DON'TS):

ಕಣ್ಣು, ಮೂಗು ಮತ್ತು ಬಾಯಿಯನ್ನು ಪದೇಪದೇ ಕೈಗಳಿಂದ ಮುಟ್ಟಿಕೊಳ್ಳಬಾರದು.

ಯಾವುದೇ ಕಾರಣಕ್ಕೂ ವೈದ್ಯರ ಸಲಹೆಯಿಲ್ಲದೆ ಸ್ವಯಂ-ಔಷಧೋಪಚಾರ (Self-Medication) ಮಾಡಬಾರದು.

ರೋಗಲಕ್ಷಣಗಳಿರುವ ಸಂದರ್ಭದಲ್ಲಿ ಇತರರೊಂದಿಗೆ ಕೈಕುಲುಕುವುದು ಅಥವಾ ಹತ್ತಿರವಿರುವುದನ್ನು ತಪ್ಪಿಸಬೇಕು.

ಸೋಂಕುಲಕ್ಷಣಗಳಿದ್ದಾಗ ಜನಸಂದಣಿ ಇರುವ ಸಾರ್ವಜನಿಕ ಸ್ಥಳಗಳಿಗೆ ತೆರಳುವುದನ್ನು ಆದಷ್ಟು ವರ್ಜಿಸಬೇಕು.

ಬಳಸಿದ ಕರವಸ್ತ್ರ ಅಥವಾ ನ್ಯಾಪ್ಕಿನ್‌ಗಳನ್ನು ಮರುಬಳಕೆ ಮಾಡಬಾರದು.

ಸಾಂಕ್ರಾಮಿಕ ರೋಗದ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯರ ಸಲಹೆ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.


 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!