ಬೆಂಗಳೂರು,ಆಗಸ್ಟ್.29: "ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸತ್ಯಕ್ಕೆ ದೂರವಾದ ವಿಚಾರವಿಟ್ಟುಕೊಂಡು ದಲಿತರಿಗೆ ಬಿಜೆಪಿ ಅನ್ಯಾಯ ಮಾಡುತಿದೆ ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
"ಪ್ರತಿಪಕ್ಷಗಳ ಸುಳ್ಳು ಆರೋಪಗಳು ಮತ್ತು ಸದನದ ಕಲಾಪಗಳಿಗೆ ಉಂಟಾಗುತ್ತಿರುವ ಅಡಚಣೆಯಿಂದ ನೊಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ" ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ
"ಪ್ರತಿಪಕ್ಷ ಬಿಜೆಪಿ ಸತ್ಯಕ್ಕೆ ದೂರವಾದ ವಿಚಾರಗಳನ್ನು ಇಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದೆ. ದಲಿತ ಮತ್ತು ಪರಿಶಿಷ್ಟ ಜಾತಿಯ ನಾಯಕರಾಗಿರುವ ನಾಗೇಂದ್ರ ಅವರು ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಈ ಕಾರಣಕ್ಕೆ ಅವರ ಮೇಲೆ ಸತ್ಯಕ್ಕೆ ದೂರವಾದ ಆರೋಪಗಳನ್ನು ಹೊರಿಸಲಾಗುತ್ತಿದೆ" ಎಂದು ಶಿವಕುಮಾರ್ ಕಿಡಿಕಾರಿದರು.
"ಒಂದೇ ವಿಚಾರಕ್ಕೆ, ಸುಳ್ಳು ಆರೋಪಕ್ಕೆ ಎರಡು ಬಾರಿ ರಾಜೀನಾಮೆ ನೀಡಿದ್ದರೆ ಅದು ನಾಗೇಂದ್ರ ಅವರು" ಎಂದು ನುಡಿದರು.
"ನಾಗೇಂದ್ರ ಅವರು ಯಾವಾಗಲೂ ಪಕ್ಷಕ್ಕಾಗಿ ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂಬುದನ್ನು ಇಂದು ಸಾಬೀತು ಮಾಡಿದ್ದಾರೆ. ಶೀಘ್ರದಲ್ಲೇ ತನಿಖೆಯಲ್ಲಿ ಅವರು ಈ ಆರೋಪಗಳಿಂದ ಮುಕ್ತರಾಗಿ ಹೊರಬರುತ್ತಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
"ಕಾನೂನಿನ ಚೌಕಟ್ಟಿನಲ್ಲಿ ಏನೇನು ಮಾಡಬೇಕೋ ಅದನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿರುವುದರಿಂದ, ಕಾನೂನು ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.